ಬೆಂಗಳೂರು: ರಾಜ್ಯದಲ್ಲಿ ಶೇಕಡ 40ರಷ್ಟು ಕಮಿಷನ್ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಗುತ್ತಿಗೆದಾರರು ಪ್ರಧಾನ ಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಆಧಾರಿತವಾಗಿ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದೆ.
ಕಾಂಗ್ರೆಸ್ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಮೇಶ್ ಕುಮಾರ್ ಮೊದಲಾದ ನಾಯಕರ ನಿಯೋಗದಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ನರೇಂದ್ರ ಮೋದಿ ಅವರು ಈ ಹಿಂದೆ ಕರ್ನಾಟಕಕ್ಕೆ ಬಂದಿದ್ದಾಗ ನಮ್ಮದು ಕಮಿಷನ್ ಸರ್ಕಾರ ಎಂದು ಆರೋಪ ಮಾಡಿದ್ದರು. ಹಾಗಾದ್ರೆ ಈಗ ನಡೆಯುತ್ತಿರುವುದೇನು? ಎಂದು ಪ್ರಶ್ನಿಸಿದ್ದಾರೆ. ಇಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯು ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅಡಿಯಲ್ಲಿ ಬರುತ್ತದೆ. ರಾಜ್ಯದಲ್ಲಿ ಸಾಂವಿಧಾನಿಕವಾಗಿ ಸರ್ಕಾರ ನಡೆಸುತ್ತಿಲ್ಲ. 300 ಕೋಟಿ ರೂಪಾಯಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎನ್ನುವುದು ಗೊತ್ತಾಗಿದೆ. ರಾಜ್ಯದಲ್ಲಿ ಎಗ್ಗಿಲ್ಲದೇ ಭ್ರಷ್ಟಾಚಾರ ನಡೆಯುತ್ತಿದೆ. ಆದಷ್ಟು ಬೇಗ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
PublicNext
25/11/2021 10:36 pm