ನವದೆಹಲಿ: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಈ ಬಗ್ಗೆ ಪ್ರಧಾನಿಗಳ ಘೋಷಣೆ ನಂತರ ಪ್ರತಿಭಟನೆ ಕೈ ಬಿಡುವಂತೆ ರೈತರಿಗೆ ಮನವಿ ಮಾಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಈಗ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆ ಮುಂದಿನ ಲೋಕಸಭೆ ಅಧಿವೇಶನದಲ್ಲಿ ಜಾರಿಯಾಗಲಿದೆ. ಬೆಳೆ ವೈವಿಧ್ಯೀಕರಣ ವಿಷಯಗಳ ಕುರಿತು ಚರ್ಚಿಸಲು ಸಮಿತಿಯನ್ನು ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಹೀಗಾಗಿ ರೈತರು ಪ್ರತಿಭಟನೆ ಕೈಬಿಡಬೇಕು ಎಂದು ನರೇಂದ್ರ ಸಿಂಗ್ ತೋಮರ್ ಒತ್ತಾಯಿಸಿದ್ದಾರೆ.
PublicNext
27/11/2021 03:24 pm