ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿ ಪ್ರಾಮಾಣಿಕರಾಗಿದ್ದರೆ ರಾಜ್ಯದ ಭ್ರಷ್ಟ ಸರ್ಕಾರವನ್ನು ವಜಾ ಮಾಡಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರಾಗಿದ್ದರೆ ರಾಜ್ಯದ ಭ್ರಷ್ಟ ಸರ್ಕಾರವನ್ನು ವಜಾ ಮಾಡಲಿ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಸರಣಿ ಟ್ಟೀಟ್‌ ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಟೆಂಡರ್‌ಗಳೂ ಸೇರಿ ಈ ವರೆಗಿನ ಎಲ್ಲಾ ಟೆಂಡರ್ ಪ್ರಕ್ರಿಯೆಗಳ ಬಗ್ಗೆ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.

ಉಪ್ಪು ತಿಂದವರು ನೀರು ಕುಡೀತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ 40% ಕಮಿಷನ್ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದಾರೆ. ಆದರೆ ಯಾವ ಇಲಾಖೆ ವಿರುದ್ಧ ಭ್ರಷ್ಟಾಚಾರದ ಆರೋಪ ಇದೆಯೋ ಅದೇ ಇಲಾಖೆಯ ಅಧಿಕಾರಿಗಳನ್ನು ತನಿಖೆಗೆ ನೇಮಿಸಿದರೆ ಸತ್ಯ ಹೊರಬರುತ್ತದಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಇನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಆರೋಪದ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ನಾವು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮ ಬೆಂಬಲಿತರಿಗೆ, ಪಕ್ಷದ ಅಭ್ಯರ್ಥಿಗೆ ಒಂದು ಮತ ಮಾತ್ರ ಹಾಕಲು ಸೂಚನೆ ಕೊಟ್ಟಿದ್ದೇನೆ. ಬೇರೆ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಬಿಜೆಪಿ - ಜೆಡಿಎಸ್ ನಡುವೆ ಒಳ ಒಪ್ಪಂದ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

Edited By : Vijay Kumar
PublicNext

PublicNext

27/11/2021 06:56 pm

Cinque Terre

103.83 K

Cinque Terre

19

ಸಂಬಂಧಿತ ಸುದ್ದಿ