ನವದೆಹಲಿ: ವಿಪಕ್ಷಗಳ ತೀವ್ರ ಕೋಲಾಹಲ, ಗದ್ದಲದ ನಡುವೆಯೇ ಇಂದು ನಡೆದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷ್ಇ ಕಾಯ್ದೆಗಳನ್ನು ರದ್ದುಗೊಳಿಸಲಾಗಿದೆ.
ಇನ್ನು ಕಾಯ್ದೆ ರದ್ದು ಮಾಡುವ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳು ಸದನದ ಬಾವಿಗಿಳಿದು ಸಾಕಷ್ಟು ಗದ್ದಲ ಗಲಾಟೆ ಮಾಡಿದರೂ ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯಲಿದೆ ಎಂದು ಈ ಹಿಂದೆಯೇ ನಾನು ಹೇಳಿದ್ದೆ. ಅದೇ ರೀತಿ ಕಾಯ್ದೆಯನ್ನು ರದ್ದುಪಡಿಸಿದೆ. ಆದರೆ, ಚರ್ಚೆಯಿಲ್ಲದೆ ಕಾಯ್ದೆ ಹಿಂಪಡೆದುಕೊಂಡಿರುವುದು ದುರಾದೃಷ್ಟ ಎಂದಿದ್ದಾರೆ.
PublicNext
29/11/2021 04:25 pm