ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಸತ್ತಿನಲ್ಲಿ ಮಾಜಿ,ಹಾಲಿ ಪ್ರಧಾನಿಗಳ ಭೇಟಿ : ದೇವೇಗೌಡರ ಕೈ ಹಿಡಿದು ಕೂರಿಸಿ, ಸತ್ಕರಿಸಿದ ಮೋದಿ

ನವದೆಹಲಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇಂದು (ಮಂಗಳವಾರ) ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈಗಾಗಲೇ ಸಂಸತ್ ನಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಇನ್ನು ಸಂಸತ್ ನಲ್ಲಿ ದೇವೇಗೌಡರು ಮೋದಿಯವರನ್ನು ಭೇಟಿಯಾಗಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿಯವರೇ ದೇವೇಗೌಡರ ಕೈ ಹಿಡಿದು, ಕುರ್ಚಿಯಲ್ಲಿ ಕೂರಿಸಿ, ನಗುತ್ತಾ ಮಾತನಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಹಾಲಿ ಪ್ರಧಾನಿ ಮತ್ತು ಮಾಜಿ ಪ್ರಧಾನಿಗಳ ಆತ್ಮೀಯತೆಗೆ ಮೆಚ್ಚುಗೆಯೂ ವ್ಯಕ್ತವಾಗಿದೆ. ನಿನ್ನೆಯಿಂದ ಆರಂಭಗೊಂಡಿರುವ ಅಧಿವೇಶನ ಡಿಸೆಂಬರ್ 23ರವರೆಗೆ ನಡೆಯಲಿದ್ದು, ಮಹತ್ವದ ವಿಷಯಗಳು ಚರ್ಚೆಯಾಗಲಿವೆ.

Edited By : Nirmala Aralikatti
PublicNext

PublicNext

30/11/2021 06:38 pm

Cinque Terre

90.34 K

Cinque Terre

31

ಸಂಬಂಧಿತ ಸುದ್ದಿ