ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾಂಗ್ರೆಸ್ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ:ಮಳಗಿ ಅಸಮಾಧಾನ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ಇದ್ದಾಗ ಮಹಿಳೆಯರಿಗೆ ಸ್ಥಾನಮಾನ ಹಾಗೂ ಗೌರವವನ್ನು ನೀಡುವ ಬಗ್ಗೆ ಸಾಕಷ್ಟು ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷದಲ್ಲಿ ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಸ್ವಾತಿ‌ ಮಳಗಿ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಸ್ಥಳೀಯ ಸಂಸ್ಥೆಯ ಮಹಿಳಾ ನಾಯಕರಿಗೆ ಯಾವುದೇ ರೀತಿಯ ಗೌರವ ಹಾಗೂ ಸ್ಥಾನಮಾನವನ್ನು ನೀಡುತ್ತಿಲ್ಲ ಎಂದರು.

ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ಮಹಿಳಾ ಪ್ರತಿನಿಧಿಗಳು ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಅಲ್ಲದೇ ಗ್ರಾಮ ಪಂಚಾಯತಿ ಸದಸ್ಯರು, ಪಾಲಿಕೆ ಚುನಾಯಿತ ಸದಸ್ಯರು ಹಾಗೂ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಮಹಿಳಾ ಕಾರ್ಯಕರ್ತರು ಸರಿಯಾದ ವ್ಯಕ್ತಿಯನ್ನು ನೋಡಿ ತಮ್ಮ ಅಮೂಲ್ಯವಾದ ಮತವನ್ನು ನೀಡಬೇಕು ಎಂದು ಅವರು ಹೇಳಿದರು.

Edited By : Manjunath H D
PublicNext

PublicNext

02/12/2021 01:43 pm

Cinque Terre

37.32 K

Cinque Terre

3