ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಜೆಡಿಎಸ್ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಪರ ಮತಯಾಚನೆ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಎಚ್.ಡಿ.ದೇವೇಗೌಡರು, ನಾನು ಮತ್ತು ಪುತ್ರ ನಿಖಿಲ್ ಸಾಕಷ್ಟು ಪ್ರಯತ್ನಿಸಿದೆವು. ಯಾರದ್ದೋ ಕಲ್ಯಾಣಕ್ಕಾಗಿ, ಯಾರನ್ನೋ ಮುಖ್ಯಮಂತ್ರಿ (ಸಿದ್ದರಾಮಯ್ಯ) ಮಾಡಲು ಜಿಟಿಡಿ ದೇಗುಲದಲ್ಲಿ ಕಲ್ಯಾಣೋತ್ಸವ ಮಾಡಿಸಿದ್ದಾರೆ. ಆದರೆ ನಾನು ಬಡವರ, ರೈತರ ಕಲ್ಯಾಣಕ್ಕಾಗಿ ಹೋರಾಡುತ್ತೇನೆ ಎಂದರು.
PublicNext
04/12/2021 08:19 pm