ಬೆಳಗಾವಿ: ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಗೋಡ್ಸೆ ಪಳಿಯುಳಿಕೆ ಮತ್ತು ವಂಶಸ್ಥರು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಕಲ್ಲೂರ ಹೊರವಲಯದ ಸಿದ್ದೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಕಾಂಗ್ರೆಸ್‌ನಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಕೊಂದವರು ಆರ್‌ಎಸ್‌ಎಸ್‌ನವರು. ನಾಥೂರಾಮ್ ಗೋಡ್ಸೆ ಆರ್‌ಎಸ್‌ಎಸ್‌ನವನು. ನರೇಂದ್ರ ಮೋದಿ ಆರ್‌ಎಸ್‌ಎಸ್‌ನವರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್‌ಎಸ್‌ಎಸ್‌ನವರಲ್ಲ. ಬಿ.ಎಸ್. ಯಡಿಯೂರಪ್ಪ ಅವರನ್ನು ಕಿತ್ತು ಹಾಕಿದಾಗ ಲಾಟರಿ ಹೊಡೆದು ಮುಖ್ಯಮಂತ್ರಿ ಆಗಿ ಬಿಟ್ಟರು. ಅವರನ್ನೂ ಕಿತ್ತು ಹಾಕಲು ಕೆ.ಎಸ್.ಈಶ್ವರಪ್ಪ ಮಾತನಾಡುತ್ತಿದ್ದಾನೆ ಎಂದು ವಾಗ್ದಾಳಿ ನಡೆಸಿದರು.
PublicNext
05/12/2021 03:13 pm