ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಅವರಲ್ಲಿ ಒಬ್ಬರಿಗೊಬ್ಬರನ್ನು ಹೋಲಿಸಲಾಗದು ಎನ್ನುವ ಮೂಲಕ ಅವರಿಬ್ಬರ ನಡುವಿನ ವ್ಯತ್ಯಾಸದ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಾತಾಡಿದ್ದಾರೆ.
ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಮತ್ತು ಮನಮೋಹನ್ ಸಿಂಗ್ ನಡುವೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಪ್ರಧಾನಿ ಮೋದಿ ಅವರದ್ದು ಫಲಿತಾಂಶ ಆಧಾರಿತ ಕ್ರಿಯಾತ್ಮಕ ನಾಯಕ ಎಂದು ಬಣ್ಣಿಸಿದ್ದಾರೆ. ಅವರಿಬ್ಬರ ನಡುವೆ ಹೋಲಿಕೆ ಮಾಡುವುದು ಕಷ್ಟ ಎಂದು ನಾನು ಭಾವಿಸುತ್ತೇನೆ. ಇವರಿಬ್ಬರ ನಡುವೆ ಜಮೀನ್ ಆಸ್ಮಾನ್ ಕಾ ಫರಕ್ ಹೈ(ಆಕಾಶ ಮತ್ತು ಭೂಮಿ ನಡುವಿನ ಅಂತರ) ಎಂದು ಹೇಳಿದರು.
PublicNext
05/12/2021 06:12 pm