ಪಣಜಿ: 2022 ರ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮಹಿಳೆಗೆ ತಿಂಗಳಿಗೆ 1,000 ರೂಪಾಯಿ ನೀಡುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಹೌದು ಇಂದು ಗೋವಾದಲ್ಲಿ 2022 ರ ವಿಧಾನಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,ಎಎಪಿ ಅಧಿಕಾರಕ್ಕೆ ಬಂದ್ರೆ 18 ವರ್ಷದ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳೂ 1,000 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದು ವಿಶ್ವದಲ್ಲೇ ಅತಿ ದೊಡ್ಡ ಹಾಗೂ ಅತ್ಯಂತ ಪರಿಣಾಮಕಾರಿಯಾದ ಮಹಿಳಾ ಸಬಲೀಕರಣ ಯೋಜನೆಯಾಗಿದೆ ಎಂದರು.
ಕೇಜ್ರಿವಾಲ್, ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದು, ಗೃಹ ಆಧಾರ್ ಫಲಾನುಭವಿಗಳಿಗೆ ಪ್ರತಿ ತಿಂಗಳು ನೀಡಲಾಗುತ್ತಿರುವ ಮೊತ್ತವನ್ನು 1,500 ರಿಂದ 2,500 ಕ್ಕೆ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷ ಗೋವಾದ ಎಲ್ಲಾ 40 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವ ಘೋಷಣೆ ಮಾಡಿದೆ.
PublicNext
05/12/2021 06:44 pm