ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಸೆಂಬರ್ 13ರಿಂದ ಬೆಳಗಾವಿಯಲ್ಲಿ ಅಧಿವೇಶನ ಫಿಕ್ಸ್: ಸಚಿವ ಕಾರಜೋಳ

ವಿಜಯಪುರ: ಅಧಿವೇಶನ ಕುರಿತಾಗಿ ಕಾಂಗ್ರೆಸ್‌ನವರು ಇಲ್ಲಸಲ್ಲದ ಆರೋಪ ಮಾಡುವುದು ಸತ್ಯಕ್ಕೆ ದೂರವಾದದ್ದು. ಈಗಾಗಲೇ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸಕಲ ಸಿದ್ಧತೆ ಮಾಡಲಾಗುತ್ತಿದೆ. ಡಿಸೆಂಬರ್ 13ರಿಂದ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಆಗೋದಿಲ್ಲ. ಒಂದು ವೇಳೆ ಆಗಬೇಕಿದ್ದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವ ಸಂಪೂರ್ಣ ಅಧಿಕಾರ ಮುಖ್ಯಮಂತ್ರಿಗೆ ಇದೆ. ಆ ನಿಟ್ಟಿನಲ್ಲಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿಗಳು ಆಗಾಗ ಸಚಿವರ ಮೌಲ್ಯ ಮಾಪನ ಮಾಡ್ತಾ ಇರ್ತಾರೆ ಎಂದ ಸಚಿವ ಗೋವಿಂದ ಕಾರಜೋಳ, ಸದ್ಯ ಕಚೇರಿ ಕೆಲಸ ಹಾಗೂ ಅಭಿವೃದ್ಧಿ ಕೆಲಸಗಳಿಗಾಗಿ ಸಿಎಂ ದೆಹಲಿ ಪ್ರವಾಸ ಮಾಡಿದ್ದಾರೆ. ಇದರಲ್ಲಿ ಬೇರೆ ಉದ್ದೇಶ ಇಲ್ಲ ಎಂದು ಕಾರಜೋಳ ಹೇಳಿದ್ದಾರೆ.

Edited By : Nagesh Gaonkar
PublicNext

PublicNext

05/12/2021 07:47 pm

Cinque Terre

76.97 K

Cinque Terre

3

ಸಂಬಂಧಿತ ಸುದ್ದಿ