ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು: ನನ್ನ ಹಾಗೂ ಯಡಿಯೂರಪ್ಪ ನಡುವೆ ವೈಯಕ್ತಿಕ ಮೈತ್ರಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೆ ಬಿಎಸ್‌ವೈ ಅವರು ನನಗೆ ಕರೆ ಮೂಲಕ ಮಾತ್ರ ಬೆಂಬಲ ಕೇಳಿದ್ದಾರೆ. ಕಾಂಗ್ರೆಸ್‌ನವರು ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದಿದ್ದಾರೆ. ಹೀಗಾಗಿ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. ಈ ಎಲ್ಲಾ ಅಂಶ ಮುಂದಿಟ್ಟುಕೊಂಡು ನಾಳೆ ಬೆಂಬಲದ ಬಗ್ಗೆ ತೀರ್ಮಾನ ಮಾಡತ್ತೇನೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಹೇಳುತ್ತೇನೆ ಎಂದಿದ್ದಾರೆ.

ಚಾಮುಂಡೇಶ್ವರಿ ಕೈ ಟಿಕೆಟ್ ಜಿಟಿ ದೇವೇಗೌಡರಿಗೆ ಕೊಡಬೇಕಾಗುತ್ತದೆ ಎಂಬ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಶಾಸಕರು ಏನೇ ಹೇಳಲಿ, ಯಾರು ಯಾವ ಪಕ್ಷಕ್ಕಾದರೂ ಹೋಗಲಿ. ಹೊಸ ನಾಯಕತ್ವಕ್ಕೆ ನಾನು ಬದ್ಧ ಎಂದು ಈಗಾಗಲೇ ಹೇಳಿದ್ದೇನೆ. ಹೊಸ ನಾಯಕತ್ವವನ್ನು ಕಾರ್ಯಕರ್ತರು ಹುಟ್ಟುಹಾಕಿಲಿದ್ದಾರೆ. ನಾವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೊಸ ನಾಯಕರ ಹುಡುಕಾಟದಲ್ಲಿ ಇದ್ದೇವೆ. ಇದೇ ಅಂಶಕ್ಕೆ ನಾನು ಬದ್ಧನಿದ್ದೇನೆ ಕುಮಾರಸ್ವಾಮಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

05/12/2021 08:43 pm

Cinque Terre

45.75 K

Cinque Terre

3

ಸಂಬಂಧಿತ ಸುದ್ದಿ