ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಖರ್ಗೆಯವರೇ ನಿಮಗೆ ಕಿಂಚಿತ್ತಾದರೂ ಸ್ವಾಭಿಮಾನ‌ ಇದೆಯಾ?': ಬಿಜೆಪಿ ಪ್ರಶ್ನೆ

ಬೆಂಗಳೂರು: ದೇಶದಲ್ಲಿ ಯುಪಿಎ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಅದಕ್ಕೂ ಮುನ್ನ ಸೋನಿಯಾ ಗಾಂಧಿ ಅವರ ಬಗ್ಗೆಯೂ ಕೊಂಕು ಮಾತಾಡಿದ್ದರು. ಆದರೂ ಕಾಂಗ್ರೆಸ್‌ ನಾಯಕರು ಟಿಎಂಸಿ ನೆಂಟಸ್ಥಿಕೆ ಬಿಡುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರೇ ನಿಮಗೆ ಜೀವನದಲ್ಲಿ ಕಿಂಚಿತ್ತಾದರೂ ಸ್ವಾಭಿಮಾನ ಬೇಕಲ್ಲವೇ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

ಟಿಎಂಸಿ ಜತೆಗಿನ ಕಾಂಗ್ರೆಸ್ ಸಖ್ಯದ ಬಗ್ಗೆ ಪ್ರಶ್ನೆ ಮಾಡಿ ಟ್ವೀಟ್ ಮಾಡಿರುವ ಬಿಜೆಪಿ ಖರ್ಗೆ ಅವರ ಕಾಲೆಳೆದಿದೆ.

ಇತ್ತೀಚೆಗೆ ದೆಹಲಿಗೆ ತೆರಳಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ, ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದರು. ಆ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ರಾಷ್ಟ್ರದಲ್ಲಿ ಕಾಂಗ್ರೆಸ್ ಉಳಿದಿಲ್ಲ. ಹೀಗಾಗಿ ಬಿಜೆಪಿ ವಿರುದ್ಧ ಸೆಣಸಲು ಸಮಾನ ಮನಸ್ಕ ಪಕ್ಷಗಳಿಗೆ ಕರೆ ನೀಡಲಾಗಿದೆ ಎಂದಿದ್ದರು.

ಇದೇ ಹಿನ್ನೆಲೆಯಲ್ಲಿ ಬಿಜೆಪಿಯು ಈ ರೀತಿ ಟ್ವೀಟ್ ಮಾಡಿದೆ.

Edited By : Nagaraj Tulugeri
PublicNext

PublicNext

05/12/2021 10:44 pm

Cinque Terre

64.44 K

Cinque Terre

10

ಸಂಬಂಧಿತ ಸುದ್ದಿ