ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂತಹ ಭ್ರಷ್ಟ ಮತ್ತು ಕೆಟ್ಟ ಸರ್ಕಾರವನ್ನು ನಾನೆಂದೂ ನೋಡಿರಲಿಲ್ಲ: ಸಿದ್ದರಾಮಯ್ಯ

ಮೈಸೂರು: ಇಂತಹ ಕೆಟ್ಟ, ಭ್ರಷ್ಟ, ದುರಾಡಳಿತದ ಸರ್ಕಾರವನ್ನು ನಾನು ಎಂದೂ ನೋಡಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನ ಶಾರದ ದೇವಿನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು, ನಾನು ತಿನ್ನಲ್ಲ, ತಿನ್ನಲು ಬಿಡಲ್ಲ ಎಂದವರು ಈಗ ತಾವೇ 40% ಕಮಿಷನ್ ಪಡೆಯುತ್ತಿದ್ದಾರೆ. ಈ ಕುರಿತು ಸ್ವತಃ ಕಾಂಟ್ರಾಕ್ಟರ್‌ಗಳೇ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಕ್ರಮ ಜರುಗಿಸಿಲ್ಲ. ಪತ್ರಕ್ಕೆ ಉತ್ತರವನ್ನೂ ಕೊಟ್ಟಿಲ್ಲ. ಕೊರೊನಾದಿಂದ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಅದರಲ್ಲು ಸುಳ್ಳು ಹೇಳಿ ಜನರಿಗೆ ಮೋಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪಿಸಿದ್ದಾರೆ.

Edited By : Nagaraj Tulugeri
PublicNext

PublicNext

08/12/2021 04:37 pm

Cinque Terre

22.88 K

Cinque Terre

9

ಸಂಬಂಧಿತ ಸುದ್ದಿ