ಉಡುಪಿ: ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ರಾಜ್ಯಸಭೆ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದ ಬಗ್ಗೆ ಗಂಭೀರ ತನಿಖೆ ಆಗಬೇಕಿದೆ.ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ ಎಂದ ಸ್ವಾಮಿ,ಹಿರಿಯ ಸುಪ್ರೀಂಕೋರ್ಟ್ ಜಡ್ಜ್ ಮೂಲಕವೇ ತನಿಖೆ ನಡೆಸಬೇಕು.ಈ ಬಗ್ಗೆ ಪ್ರಧಾನಿಗಳು ಜನರಿಗೆ ಸೂಕ್ತ ಮಾಹಿತಿ ನೀಡಬೇಕು.ದೇಶದ ಸುರಕ್ಷತೆ ದೃಷ್ಟಿಯಿಂದ ಇದೊಂದು ಗಂಭೀರ ಎಚ್ಚರಿಕೆ ಯಾಗಿದೆ. ಘಟನೆಯಿಂದ ನನಗೆ ಶಾಕ್ ಆಗಿದೆ ಎಂದರು. ಸುಬ್ರಹ್ಮಣ್ಯನ್ ಸ್ವಾಮಿ ಅವರು ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮದ ಜೊತೆ ಮಾತನಾಡಿದರು.
PublicNext
08/12/2021 07:41 pm