ಹುಬ್ಬಳ್ಳಿ: ಒಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದೇನೆ. ಶಿಗ್ಗಾಂವ ಕ್ಷೇತ್ರದಲ್ಲಿ ಮತದಾನ ಮಾಡಲಿರುವೆ. ಮುಂದೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಹಾಗಾಗಿ ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.
ಇನ್ನೂ ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಕಾರ್ಯ ಆರಂಭವಾಗಿದ್ದು, ಅದಕ್ಕಾಗಿ ಪರಿಹಾರ ಆ್ಯಪ್ ಮೂಲಕ ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
PublicNext
10/12/2021 09:40 am