ಹುಬ್ಬಳ್ಳಿ: ಹೆಲಿಕಾಪ್ಟರ್ ದುರಂತದಲ್ಲಿ ಒಬ್ಬ ಅಪ್ರತಿಮ ಯೋಧನನ್ನು ದೇಶ ಕಳೆದುಕೊಂಡಿದೆ. ಘಟನೆ ಕುರಿತು ತನಿಖೆ ಮಾಡೋಕೆ ನಿರ್ಧಾರ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿನ್ ರಾವತ್ ನಿಧನ ಘಟನೆ ಅತ್ಯಂತ ದುರಂತವಾದದ್ದು, ನಮಗೆಲ್ಲಾ ತುಂಬಾ ದುಃಖವಾಗಿದೆ. ಈ ಬಗ್ಗೆ ತನಿಖೆ ನಡೆಸಲು ನಿರ್ಧಾರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.
PublicNext
10/12/2021 10:01 am