ದಾವಣಗೆರೆ: ನಾನು ಸಿಎಂ ನಾನೇ ಆಗ್ತೇನೆ. ಅದರಲ್ಲಿ ಅದರಲ್ಲಿ ತಪ್ಪೇನಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆ ಫಲಿತಾಂಶ ಬರಲಿ. ಆಗ ನಾನು ಹೇಳುತ್ತೇನೆ. ನಾನು ಸಿಎಂ ಸ್ಥಾನದ ಆಕಾಂಕ್ಷಿ, ಅದರಲ್ಲೇನಿದೆ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಗೆ ಈಗ ಎಲ್ಲೆಡೆ ಒಳ್ಳೆಯ ವಾತಾವರಣ ಇದೆ. ಜನರು ಬಿಜೆಪಿ ಮೇಲೆ ಬೇಜಾರಾಗಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ 140 ಸ್ಥಾನ ಗೆಲ್ಲುತ್ತೇವೆ. ವಿಧಾನಸಭೆ ಚುನಾವಣೆ ಆದ ಮೇಲೆ ಸಿದ್ದರಾಮಯ್ಯರೂ ಆಗಬಹುದು. ನಾನು ಆಗಬಹುದು. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
PublicNext
10/12/2021 04:56 pm