ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತ್ತೆ ಬಂಪರ್ ಆಫರ್ ಸಿಗುತ್ತಾ? ಎನ್ನುವ ಊಹಾಪೋಹಗಳು ಎದ್ದಿವೆ. ಇದಕ್ಕೆ ಪುಷ್ಟಿ ಎಂಬಂತೆ ಎಬಿಪಿ ನ್ಯೂಸ್- ಸಿ ವೋಟರ್ ಸಮೀಕ್ಷೆ ಕೂಡ ಇದೇ ಮಾತನ್ನು ಹೇಳಿದೆ.
ಈ ಸಲ ಬಿಜೆಪಿಗೆ ನಿರೀಕ್ಷಿತ ಪ್ರಮಾಣದಲ್ಲಿ ಸೀಟು ಸಿಗದಿದ್ದರೂ ಅಧಿಕಾರಕ್ಕೆ ಬೇಕಾಗುವಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ. ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಹಾಗೂ ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷವು ಬಿಜೆಪಿಗೆ ಪೈಪೋಟಿ ನೀಡಲಿದೆ ಎಂಬುದನ್ನು ಕೂಡ ಎಬಿಪಿ ಸಿ-ವೋಟರ್ ಸಮೀಕ್ಷೆ ಹೇಳಿದೆ.
ಉತ್ತರ ಪ್ರದೇಶದಲ್ಲಿ ಹಾಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕಾರ ಉಳಿಸಿಕೊಳ್ಳಲಿದ್ದಾರೆ ಎಂದು ಈ ಸಮೀಕ್ಷೆಯಲ್ಲಿ ಭಾಗವಹಿಸಿದ 41%ರಷ್ಟು ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
PublicNext
12/12/2021 04:24 pm