ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೊಳಿಸುತ್ತೇವೆ: ಸಚಿವ ಸುನಿಲ್‌ಕುಮಾರ್

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯಲ್ಲಿ ನಾವು ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಲ್ಲ. ಮಹಾತ್ಮಾ ಗಾಂಧೀಜಿ, ವಿವೇಕಾನಂದರು ಕೂಡ ಮತಾಂತರವನ್ನು ವಿರೋಧಿಸಿದ್ದರು. ಇದನ್ನೇ ಕಾನೂನು ಸ್ವರೂಪದಲ್ಲಿ ಜಾರಿ ಮಾಡಿದ್ದೇವೆ ಎಂದು ಇಂಧನ ಸಚಿವ ಸುನಿಲ್‌ಕುಮಾರ್ ಹೇಳಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಈಗ ಈ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನೂ ತರುತ್ತೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ.

ಕಾಂಗ್ರೆಸ್ ಪಕ್ಷ ಮತಾಂತರ ನಿಷೇಧ ಕಾಯ್ದೆಯನ್ನು ಏಕೆ ವಿರೋಧ ಮಾಡುತ್ತಿದೆ ಎಂಬುದನ್ನ ಹೇಳಲಿ. ಆಗ ನಾವು ಚರ್ಚೆಗೆ ಸಿದ್ಧರಿದ್ದೇವೆ. ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ? ಅದರ ದುಷ್ಪರಿಣಾಮ ಏನು ಎಂಬುದು ನಮಗೆ ಗೊತ್ತಿದೆ. ಕೇವಲ ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆಯನ್ನೂ ತರುತ್ತೇವೆ.

Edited By : Manjunath H D
PublicNext

PublicNext

13/12/2021 11:18 am

Cinque Terre

31.04 K

Cinque Terre

5

ಸಂಬಂಧಿತ ಸುದ್ದಿ