ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೇಲಿಹಾರಿಯಾದರೂ ಸುವರ್ಣಸೌಧ ಮುತ್ತಿಗೆ; ಸರ್ಕಾರಕ್ಕೆ ಗಡುವು ಕೊಟ್ಟ ಕೋಡಿಹಳ್ಳಿ...!

ಬೆಳಗಾವಿ: ಕೇಂದ್ರದಂತೆ ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಇಂದು ಮಧ್ಯಾಹ್ನ 2.30ರೊಳಗೆ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ ಬೇಲಿಹಾರಿಯಾದರೂ ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬೆಳಗಾವಿಯ ಸುವರ್ಣಸೌಧ ಎದುರಿರುವ ಕೊಂಡುಸಕೊಪ್ಪದಲ್ಲಿ ರೈತರನ್ನು ಉದ್ದೇಶಿಸಿ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ರೈತರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ನಾವು ಬೆಳಗ್ಗೆ 11 ಘಂಟೆಯಿಂದ ಕೊಂಡುಕೊಪ್ಪದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರ ಕೂಡಲೇ ಸ್ಥಳಕ್ಕೆ ಬಂದು ನಮ್ಮ ಜೊತೆಗೆ ಮಾತನಾಡಬೇಕು. ಸರ್ಕಾರದ ಪ್ರತಿನಿಧಿಗಳು ಇಲ್ಲಿಗೆ ಬರದಿದ್ದರೆ ನಾವೂ ಬೇಲಿ ಹಾರಿಯಾದರೂ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ನಮ್ಮನ್ನು ಯಾರು ತಡೆಯುತ್ತಾರೆ ನೋಡುತ್ತೇವೆ. ಪೊಲೀಸರ ಕಣ್ಣುತಪ್ಪಿಸಿ ಸುವರ್ಣ ಸೌಧಕ್ಕೆ ಹೋಗಲೇಬೇಕು. ನಾವು ಇಲ್ಲಿ ಹರಿಕಥೆ ಕೇಳಲು ಬಂದಿಲ್ಲ, ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು.

Edited By : Nagesh Gaonkar
PublicNext

PublicNext

13/12/2021 02:48 pm

Cinque Terre

38.89 K

Cinque Terre

1