ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. ಇನ್ನೂ ಹಲವು ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು ಮೊದಲ ಪ್ರಯತ್ನದಲ್ಲೇ ಹಾಸನದಿಂದ ಜೆಡಿಎಸ್ ಪಕ್ಷದ ಸೂರಜ್ ರೇವಣ್ಣ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ಹಾಸನ ಜಿಲ್ಲೆಯ ಜಜಿದ್ಧಿನ ಪರಿಷತ್ ಕದನದ ಮತಎಣಿಕೆ ಕಾರ್ಯ ಆರಂಭಗೊಳ್ಳುತ್ತಿದ್ದಂತೆ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ಗೌಡ ಅವರು, ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಈ ಬಳಿಕ ನಡೆದ ಮತ ಎಣಿಕೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಸೂರಜ್ ಗೌಡ ಗೆಲುವು ಸಾಧಿಸಿದ್ದಾರೆ.
ಇನ್ನು ಕೊಡಗು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಮೊದಲ ಖಾತೆ ಇದಾಗಿದ್ದು ಕಾಂಗ್ರೆಸ್‌ನ ಮಂಥರ್ ಗೌಡ ವಿರುದ್ಧ 105 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಬೀದರ್ ಜಿಲ್ಲೆಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಭೀಮರಾವ್ ಪಾಟೀಲ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಖಾತೆ ತೆರೆದಿದೆ. ಬೀದರ್ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಅವರು 300ಕ್ಕೂ ಹೆಚ್ಚು ಪತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಮೊದಲ ಖಾತೆಯನ್ನು ತೆರೆದಿದೆ.
PublicNext
14/12/2021 11:29 am