ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಷತ್ ಚುನಾವಣೆ ಮತ ಎಣಿಕೆ ಚುರುಕು : ಗೆಲುವಿನ ನಗೆ ಬೀರಿದವರು ಇವರೇ ನೋಡಿ..

ಬೆಂಗಳೂರು: ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ. ಎಲ್ಲ ಕ್ಷೇತ್ರಗಳಿಗೆ ಡಿ. 10ರಂದು ಮತದಾನ ನಡೆದು ಶೇ. 99.87ರಷ್ಟು ಮತದಾನವಾಗಿತ್ತು. ಇಂದು ಮತ ಏಣಿಕೆ ಕಾರ್ಯ ಆರಂಭವಾಗಿದ್ದು ಹಲವರ ಭವಿಷ್ಯದ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಮಧ್ಯಾಹ್ನದ ಹೊತ್ತಿಗೆ ಬಹುತೇಕ ಬಲಾಬಲ ಗೊತ್ತಾಗಲಿದ್ದು, ಸಂಜೆ ವೇಳೆಗೆ ಪೂರ್ಣ ಪ್ರಮಾಣದ ಫಲಿತಾಂಶ ಹೊರಬಿಳಲಿದೆ.

ಕೊಡಗಿನಲ್ಲಿ ಬಿಜೆಪಿ

ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 102 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರಸ್ ಅಭ್ಯರ್ಥಿ ಮಂಥರ್ ಗೌಡ ಅವರು ಸೋಲುಕಂಡಿದ್ದು, ಕೊಡಗು ಬಿಜೆಪಿ ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತಾಗಿದೆ.

ಹಾಸನದಲ್ಲಿ ಜೆಡಿಎಸ್

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. 2281 ಮತಗಳನ್ನು ಪಡೆದ ಸೂರಜ್, 1533 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಶಂಕರ್ 748 ಮತ, ಬಿಜೆಪಿ ಅಭ್ಯರ್ಥಿ ಎಚ್.ಎಂ.ವಿಶ್ವನಾಥ್ 421 ಮತ ಪಡೆದಿದ್ದಾರೆ.

ಬೀದರ್ ನಲ್ಲಿ ಕಾಂಗ್ರೆಸ್

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ ಪಾಟೀಲ್ 220 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ

ಶಿವಮೊಗ್ಗದಲ್ಲಿ ಚಲಾವಣೆಯಾಗಿದ್ದ 4158 ಮತಗಳು ಪೈಕಿ 2208 ಮತ ಬಿಜೆಪಿ ಅಭ್ಯರ್ಥಿ ಪಾಲಾಗಿದ್ದು, ಅರುಣ್ ಗೆಲುವಿನ ನಗೆ ಬೀರಿದ್ದಾರೆ.

ಚಿತ್ರದುರ್ಗದಲ್ಲಿ ಕಾಂಗ್ರೆಸ್

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಮಶೇಖರ್ ವಿರುದ್ಧ ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು ಸಾಧಿಸಿದ್ದಾರೆ. ಬಿಜೆಪಿಗೆ 2617 ಮತ, ಕಾಂಗ್ರೆಸ್ 2263 ಮತ ಪಡೆದಿದ್ದಾರೆ.

ಬೆಂಗಳೂರಲ್ಲಿ ಬಾಬುಗೆ ಸೋಲು

ಬೆಂಗಳೂರು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಉತ್ತರ ಕನ್ನಡದಲ್ಲಿ ಬಿಜೆಪಿ

ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ವಿರುದ್ಧ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಸಾಧಿಸಿದ್ದಾರೆ.

Edited By : Nirmala Aralikatti
PublicNext

PublicNext

14/12/2021 12:26 pm

Cinque Terre

89.97 K

Cinque Terre

1

ಸಂಬಂಧಿತ ಸುದ್ದಿ