ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಹೋದರನ ಗೆಲುವು : ಸತೀಶ್ ಕಾಲಿಗೆ ನಮಸ್ಕರಿಸಿದ ಲಕ್ಷ್ಮಿ

ಬೆಳಗಾವಿ:ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಲಿಗೆ ಪರಿಷತ್ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಇಂದು ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಇನ್ನು ಭಾರೀ ಕುತೂಹಲ ಮೂಡಿಸಿದ್ದ ಹಾಗೂ ಹೈವೋಲ್ಟೇಜ್ ಕ್ಷೇತ್ರವಾಗಿ ಗುರುತಿಸಿಕೊಂಡಿದ್ದ ಬೆಳಗಾವಿ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚನ್ನರಾಯ ಹಟ್ಟಿಹೊಳಿ 3718 ಮತ ಪಡೆದು ಮೊದಲ ಪ್ರಾಶಸ್ತ್ಯದಲ್ಲೇ ಗೆದ್ದು ಬೀಗಿದ್ದಾರೆ.

ಮತ ಎಣಿಕೆ ಆರಂಭದಲ್ಲೇ ಬೆಳಗ್ಗೆಯಿಂದ ದೇವಸ್ಥಾನ ಮತ್ತು ಪೂಜೆಯಲ್ಲಿ ತೊಡಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರನ ಗೆಲುವಿನ ಬಳಿಕ ಹಾಲು ಕುಡಿದು ಸಿಹಿ ತಿಂದು ಸಂಭ್ರಮಿಸಿದರು. ಬಳಿಕ ಪಕ್ಷದ ಕಚೇರಿಗೆ ಆಗಮಿಸಿ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ಬಿದ್ದು ಆರ್ಶೀವಾದ ಪಡೆದರು.

ರಮೇಶ್ ಜಾರಕಿಹೊಳಿಗೆ ಸೆಡ್ಡು ಹೊಡೆದು ತನ್ನ ಸಹೋದರನನ್ನು ಗೆಲ್ಲಿಸಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್, ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರಿಗೆ ಸೇರಿದ್ದು ಎಂದರು.

Edited By : Nirmala Aralikatti
PublicNext

PublicNext

14/12/2021 05:13 pm

Cinque Terre

67.59 K

Cinque Terre

1

ಸಂಬಂಧಿತ ಸುದ್ದಿ