ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನನ್ನ ಹುಟ್ಟು ಹಬ್ಬ ಆಚರಿಸಬೇಡಿ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ನಾಳೆ (ಡಿ.16) ಮಾಜಿ ಸಿಎಂ ಕುಮಾರಸ್ವಾಮಿ ಅವರ ಜನ್ಮದಿನ ಇದೆ. ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಯಾರೂ ಆಚರಿಸಬೇಡಿ ಎಂದಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಕಾರಣವನ್ನೂ ಕೊಟ್ಟಿರುವ ಅವರು ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಮಾಡಿದ ಟ್ವೀಟ್ ಹೀಗಿದೆ...

'ನಾಳೆ ಡಿಸೆಂಬರ್ 16, 2021ರಂದು ನನ್ನ ಜನ್ಮದಿನ. ಈ ದಿನಕ್ಕಾಗಿ ನಿಮ್ಮಲ್ಲಿರುವ ಪ್ರೀತಿಯ ಕಾತರವನ್ನು ನಾನು ಬಲ್ಲೆ. ಕಳೆದೆರಡು ವರ್ಷಗಳಿಂದ ಕೋವಿಡ್‌-19 ಕಾರಣಕ್ಕೆ ನಾವೆಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾವು-ನೋವು ಕಂಡಿದ್ದೇವೆ. ಮಳೆ-ನೆರೆ ವಿಕೋಪಗಳಿಂದ ತತ್ತರಿಸಿದ್ದೇವೆ. ರೈತರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಹೀಗಾಗಿ ಅದ್ಧೂರಿಯಾಗಿ ಆಚರಣೆ ಮಾಡೋದು ಬೇಡವೆಂದು ನಿರ್ಧರಿಸಿದ್ದೇನೆ. ಹಾರ ತುರಾಯಿ ಹಾಕಿ, ಕೇಕ್‌ ಕತ್ತರಿಸಿ ವಿಜೃಂಭಣೆ ಮಾಡುವುದು ಬೇಡ. ಅಭಿಮಾನಿಗಳು, ಕಾರ್ಯಕರ್ತರು ಹಣ ಖರ್ಚು ಮಾಡಿಕೊಂಡು ನನ್ನಲ್ಲಿಗೆ ಬರುವುದು ಬೇಡ. ನೀವಿದ್ದಲ್ಲಿಯೇ ಬಡವರಿಗೆ, ದೀನ ದಲಿತರಿಗೆ, ಮಳೆ-ನೆರೆಯಿಂದ ತತ್ತರಿಸಿದ ಜನರಿಗೆ ನೆರವಾಗಿ' ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

15/12/2021 01:03 pm

Cinque Terre

46.98 K

Cinque Terre

2

ಸಂಬಂಧಿತ ಸುದ್ದಿ