ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ವಿಧಾನ ಪರಿಷತ್‌ನ 14 ಜನ ಕಾಂಗ್ರೆಸ್‌ ಸದಸ್ಯರ ಅಮಾನತು

ಬೆಳಗಾವಿ: ವಿಧಾನ ಪರಿಷತ್‌ನ 14 ಜನ ಕಾಂಗ್ರೆಸ್‌ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.

ಸಚಿವ ಬೈರತಿ ಬಸವರಾಜು ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ನೀಡಿರುವ ಸೂಚನೆ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿ ಕಾಂಗ್ರೆಸ್ ಮಂಡಿಸಿದ್ದ ಸೂಚನೆಯನ್ನು ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕಾರಿಸಿದರು. ಇದರಿಂದಾಗಿ ಗರಂ ಆದ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಕೆಲಕಾಲ ಪ್ರತಿಭಟನೆ ನಡೆಸಿದರು.

ಸಚಿವರ ರಾಜೀನಾಮೆ ನೀಡುವಂತೆ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ನಾರಾಯಣ ಸ್ವಾಮಿ ಅವರು ನಿಲುವಳಿ ಸೂಚನೆ ಮಂಡಿಸಿ, ನಿಯಮ 59ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿದರು. ಆದರೆ ನಿಲುವಳಿಯನ್ನು ಬಸವರಾಜ ಹೊರಟ್ಟಿ ತಿರಸ್ಕರಿಸಿದರು. 59 ರ ಬದಲಾಗಿ 63 ಗೆ ಬದಲಾಯಿಸಲು ಬರೆದುಕೊಡುವಂತೆ ಹೊರಟ್ಟಿ ಸೂಚನೆ ನೀಡಿದರು. ಆದರೆ ಇದಕ್ಕೆ ಒಪ್ಪದೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು.

ಇದರಿಂದಾಗಿ ಕೋಪಗೊಂಡ ಸಭಾಪತಿ ಬಸವರಾಜ ಹೊಟ್ಟಿ ಅವರು, ವಿಪಕ್ಷ ನಾಯಕ ಎಸ್‌.ಆರ್‌. ಪಾಟೀಲ್, ಪಿ.ಆರ್.ರಮೇಶ್, ನಾರಾಯಣಸ್ವಾಮಿ, ಬಿ.ಕೆ.ಹರಿಪ್ರಸಾದ್, ಸಿಎಂ ಇಬ್ರಾಹಿಂ, ಪ್ರತಾಪ್ ಚಂದ್ರಶೆಟ್ಟಿ ಸೇರಿ 14 ಜನ ಕಾಂಗ್ರೆಸ್‌ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಸದನಸದಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

Edited By : Vijay Kumar
PublicNext

PublicNext

15/12/2021 04:07 pm

Cinque Terre

54.71 K

Cinque Terre

7

ಸಂಬಂಧಿತ ಸುದ್ದಿ