ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಇದಕ್ಕೆ ಜೆಡಿಎಸ್ ಪಕ್ಷ ತನ್ನ ನಿಲುವನ್ನು ಸ್ಪಷ್ಟ ಪಡಿಸಿದೆ.
ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ, ಮತಾಂತರ ನಿಷೇಧ ಕಾಯ್ದೆಗೆ ನಮ್ಮ ವಿರೋಧ ಇದೆ ಎಂದಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರೋದು ಉತ್ತರ ಕರ್ನಾಟಕ ಭಾಗ ಹಾಗೂ ರಾಜ್ಯದ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋದಕ್ಕಾಗಿ. ಹೊರತಾಗಿ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಅಲ್ಲ. ಈ ಕಾಯ್ದೆಗೆ ನಮ್ಮ ಪಕ್ಷದಿಂದ ಬಲವಾದ ವಿರೋಧವಿದೆ. ನಮ್ಮ ಪಕ್ಷದ ಎಲ್ಲ ಶಾಸಕರು ಕೂಡ ಇದನ್ನು ವಿರೋಧಿಸಲಿದ್ದರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
PublicNext
16/12/2021 09:38 am