ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಸಲೀಂ ಅಭಿನಂದನೆ

ಗದಗ: ಅವಿಭಜಿತ ಧಾರವಾಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಲೀಂ ಅಹ್ಮದ ಗದಗ ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

ನಗರದಲ್ಲಿಂದು ಕಾಂಗ್ರೆಸ್ ಕಚೇರಿಯಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತದಾನ ಮಾಡುವ ಮೂಲಕ ನನ್ನ ಗೆಲುವಿಗೆ ಶ್ರಮಿಸಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಧನ್ಯವಾದಗಳು. ಹುಸಿ ಆಶ್ವಾಸನೆ ಮೂಲಕ ಯಾವುದೇ ಭರವಸೆಯನ್ನು ನೀಡದೇ ನನ್ನ ಕೈಯಲ್ಲಿ ಸಾಧ್ಯವಾದ ಮಟ್ಟಿಗೆ ನಾನು ಕೆಲಸವನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಬಿಜೆಪಿಯವರು ಸುಳ್ಳು ಭರವಸೆ ನೀಡಿ ಜನರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ಜನಪರವಾಗಿ ಕೆಲಸ ಮಾಡುವ ಮೂಲಕ ಜನರ ಮನಸ್ಸಿನಲ್ಲಿ ಸ್ಥಾನ ಪಡೆದಿದೆ ಎಂದರು‌.

Edited By : Shivu K
PublicNext

PublicNext

16/12/2021 08:23 pm

Cinque Terre

51.91 K

Cinque Terre

2

ಸಂಬಂಧಿತ ಸುದ್ದಿ