ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ': ಕ್ಷಮೆಯಾಚಿಸಿದ ಮಾಜಿ ಸ್ಪೀಕರ್

ಬೆಳಗಾವಿ : ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಅವರು ನಿನ್ನೆ ಅಧಿವೇಶನದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು.

ಮಾಜಿ ಸ್ಪೀಕರ್ ಅವರ ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೆ ಟ್ವಿಟ್ ಮಾಡಿ, ‘ಅತ್ಯಾಚಾರ’ ಸಂಬಂಧ ಅಧಿವೇಶನದಲ್ಲಿ ನೀಡಿರುವ ನನ್ನ ಹೇಳಿಕೆ ಕುರಿತು ಎಲ್ಲರಿಗೂ ನನ್ನ ಪ್ರಾಮಾಣಿಕ ಕ್ಷಮೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಅತ್ಯಂತ ಹೇಯವಾದ ಅಪರಾಧವನ್ನು ಅಲಕ್ಷಿಸುವುದು ನನ್ನ ಉದ್ದೇಶವಾಗಿರಲಿಲ್ಲ. ಮಾತಿನ ಭರದಲ್ಲಿ ಆ ಮಾತು ಬಂದಿದೆ. ಇನ್ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Edited By : Nirmala Aralikatti
PublicNext

PublicNext

17/12/2021 12:03 pm

Cinque Terre

30.44 K

Cinque Terre

23

ಸಂಬಂಧಿತ ಸುದ್ದಿ