ಗದಗ: ಕೊಲ್ಲಾಪುರದಲ್ಲಿ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ದುಷ್ಕರ್ಮಿಗಳ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿದರು.
ಕನ್ನಡಿಗರ ಭಾವನೆಗೆ ಹಾಗೂ ಕನ್ನಡಿಗರಿಗೆ ದಕ್ಕೆ ಉಂಟು ಮಾಡಿದ ಶಿವಸೇನಾ ವಿರುದ್ಧ ಸೂಕ್ತ ಕ್ರಮಗಳನ್ನು ಜರುಗಿಸಿ ಪುಂಡರಿಗೆ ತಕ್ಕ ಶಿಕ್ಷೆಯನ್ನು ನೀಡಬೇಕು ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
PublicNext
17/12/2021 02:54 pm