ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗನಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಸಚಿವ ಸಿ.ಸಿ.ಪಾಟೀಲ ಮಾತು:ಬಿಜೆಪಿ ಅಭ್ಯರ್ಥಿಗಳ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಚಿವ

ಗದಗ: ಗದಗ-ಬೇಟಗೇರಿ ನಗರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ದಾಖಲೆಯ ಮಟ್ಟದಲ್ಲಿ ಜಯವನ್ನು ಸಾಧಿಸುತ್ತಾರೆ. 35 ವಾರ್ಡ್ ಗಳಲ್ಲಿ 25ಕ್ಕೂ ಅಧಿಕ ಸ್ಥಾನವನ್ನು ಭಾರತೀಯ ಜನತಾ ಪಕ್ಷ ಗೆಲ್ಲಲಿದೆ ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿಂದು ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹಾಗೂ ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಕಾರ್ಯವೈಖರಿ ಹಾಗೂ ಭಾರತೀಯ ಜನತಾ ಪಕ್ಷದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿ ಅಭ್ಯರ್ಥಿಗಳಿಗೆ ಮತಹಾಕುವ ಮೂಲಕ ಬಿಜೆಪಿ ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ನವರ ಸುಳ್ಳು ಭರವಸೆ ಹಾಗೂ ದುರಾಢಳಿತವನ್ನು ಜನರು ಮರೆತಿಲ್ಲ. ಈ ಹಿನ್ನಲೆಯಲ್ಲಿ ಗದಗ ಬೆಟಗೇರಿಯಲ್ಲಿ ಕಮಲ ಪಡೆಯು ವಿಜಯದ ಪತಾಕೆಯನ್ನು ಹಾರಿಸಲಿದೆ ಎಂದು ಅವರು ಹೇಳಿದರು.

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಚರ್ಚೆಯ ಕುರಿತು ಮಾತನಾಡಿದ ಅವರು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕ್ರೀಯಾ ಯೋಜನೆ ರೂಪಿಸುತ್ತಿದ್ದಾರೆ. ಆದಷ್ಟು ಬೇಗ ಉತ್ತರ ಕರ್ನಾಟಕ ಅಭಿವೃದ್ಧಿ ಆಗುವುದು ಖಂಡಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Edited By : Nagesh Gaonkar
PublicNext

PublicNext

17/12/2021 03:05 pm

Cinque Terre

44.18 K

Cinque Terre

1

ಸಂಬಂಧಿತ ಸುದ್ದಿ