ಗದಗ; ಗದಗ-ಬೇಟಗೇರಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ರೋಣ ಶಾಸಕ ಕಳಕಪ್ಪ ಬಂಡಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, ಇದೇ 27ರಂದು ನಗರಸಭೆ ಚುನಾವಣೆ ನಡೆಯಲಿದ್ದು, ನಮ್ಮ ಬಿಜೆಪಿಯ ಅಭ್ಯರ್ಥಿಗಳು ದಾಖಲೆಯ ಗೆಲುವನ್ನು ಸಾಧಿಸುತ್ತಾರೆ ಎಂದರು.
ಬಿಜೆಪಿಯ ಅಭಿವೃದ್ಧಿ ಕಾರ್ಯಗಳೇ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿದ್ದು, ಸ್ಥಳೀಯವಾಗಿ ಅಭಿವೃದ್ಧಿ ಮಾಡಲು ನಮ್ಮ ಅಭ್ಯರ್ಥಿಗಳು ಸಮರ್ಥರಾಗಿದ್ದಾರೆ. ಈ ನಿಟ್ಟಿನಲ್ಲಿ ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದರು.
PublicNext
17/12/2021 04:53 pm