ಚಂಡೀಗಢ: ಪಂಜಾಬ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾಗಿ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಂಡಿದ್ದಾಗಿ ಸಿಂಗ್ ಹೇಳಿದ್ದಾರೆ.
ಬಿಜೆಪಿ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ ಬಳಿಕ ಅಮರೀಂದರ್ ಸಿಂಗ್ ಮೈತ್ರಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಚುನಾವಣೆಗಾಗಿ ಸೀಟುಗಳ ಹಂಚಿಕೆ ಸಂಬಂಧ ಮಾತುಕತೆ ನಡೆಯುತ್ತಿದೆ. ಯಾವ ಅಭ್ಯರ್ಥಿ ಯಾವ ಕ್ಷೇತ್ರಕ್ಕೆ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಸದ್ಯದರಲ್ಲೇ ತಿಳಿಸಲಿದ್ದೇವೆ ಎಂದು ಅಮರೀಂದರ್ ಸಿಂಗ್ ಹೇಳಿದ್ದಾರೆ.
ಅಲ್ಲದೇ ಕೇಂದ್ರ ಸಚಿವ ಹಾಗೂ ಪಂಜಾಬ್ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಆಲಂಗಿಸಿರುವ ಫೋಟೊವನ್ನು ಕ್ಯಾಪ್ಟನ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
PublicNext
17/12/2021 09:23 pm