ಬೆಂಗಳೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಗೊಳಿಸಿದ್ದನ್ನ ಗೃಹ ಸಚಿವ ಆರಗ ಜ್ಞಾನೇಂದ್ರ ವಿರೋಧಿಸಿ ಕಿಡಿಕಾರಿದ್ದಾರೆ.
ಒಂದೆರಡು ದಿನಗಳಿಂದ ಬೆಳಗಾವಿಯಲ್ಲಿ ಕೆಲವು ಜನ ಪುಂಡತನ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸರ್ಕಾರಿ ವಾಹನಗಳನ್ನ ಟಾರ್ಗೆಟ್ ಮಾಡಿದ್ದಾರೆ. ರಾತ್ರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಆರಗ ಜ್ಞಾನೇಂದ್ರ ವಿವರಿಸಿದ್ದಾರೆ.
ಪುಂಡರ ವಿರುದ್ಧ ಕಠಿಣಕ್ರಮ ಜರುಗಿಸಲು ಪೊಲೀಸರಿಗೆ ತಿಳಿಸಿದ್ದೇನೆ.ಮುಲಾಜಿಲ್ಲದೆ ಕ್ರಮ ಜರುಗಿಸಲು ತಿಳಿಸಿದ್ದೇನೆ. ಸಂಗೊಳ್ಳಿ ರಾಯಣ್ಣ,ಶಿವಾಜಿ ಇವರೆಲ್ಲ ರಾಷ್ಟ್ರಕ್ಕಾಗಿಯೇ ಹೋರಾಡಿದವರು ಎಂದು ಹೇಳಿದ್ದಾರೆ.
PublicNext
18/12/2021 11:05 am