ವಿಜಯಪುರ: ಶಿವಸೇನೆ ಪಕ್ಷವು ಕೇವಲ ಒಂದು ಭಾಷೆಗೆ ಸೀಮಿತವಾಗಿರುವುದು ದುರ್ದೈವ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ, ಶಿವಾಜಿ ಮಹರಾಜರ ಪ್ರತಿಮೆಗೆ ಅವಮಾನಿಸಿದ ಕಿಡಿಗೇಡಿಗಳ ಕೃತ್ಯದ ಬಗ್ಗೆ ವಿಜಯಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದರ ಹಿಂದೆ ದೊಡ್ಡ ಗುಂಪಿದೆ. ಎಂದಿದ್ದಾರೆ.
ದೇಶದ ಮಹಾನ್ ವ್ಯಕ್ತಿಗಳ ಪುತ್ಥಳಿ ಮೇಲೆ ಅವಮಾನ ಮಾಡಲಾಗುತ್ತಿದೆ. ಇದನ್ನು ಒಪ್ಪಲಾಗದು. ಅವಮಾನ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಎಂಇಎಸ್ ಹಾಗೂ ಶಿವಸೇನೆ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಶಿವಸೇನೆ ಒಂದು ಭಾಷೆಗೆ ಸೀಮಿತವಾಗಿರುವುದು ದುರ್ದೈವ. ಎಂಇಎಸ್ ನಂತಹ ಸಂಘಟನೆಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ನಾಳೆ ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆಂದು ಶಾಸಕ ಯತ್ನಾಳ್ ಹೇಳಿದ್ದಾರೆ.
PublicNext
18/12/2021 03:29 pm