ಚಿಕ್ಕೋಡಿ: ಹೊಸದಾಗಿ ಚಿಕ್ಕೋಡಿ ಜಿಲ್ಲೆ ಮಾಡಬೇಕಂಬ ನಾಗರಿಕರ ಒತ್ತಾಯ ದಿನದಿಂದ ದಿನಕ್ಕೆ ಹೆಚ್ಚು ಕಾವು ಪಡೆದುಕೊಂಡಿದೆ ಹಾಗೂ ಅಭಿವೃದ್ಧಿ ವಿಚಾರವನ್ನು ಮರೆತಿದ್ದಾರೆ ಎಂಬ ಆರೋಪದೊಂದಿಗೆ ಚಿಕ್ಕೋಡಿ ಜಿಲ್ಲಾ ಹೋರಾಟಗಾರರು ಶಾಸಕರ ಫೋಟೋಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.ಸಚಿವರಾದ ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಶಾಸಕರಾದ ಗಣೇಶ ಹುಕ್ಕೇರಿ, ಶ್ರೀಮಂತ ಪಾಟೀಲ್, ಮಹೇಶ್ ಕುಮಠಳ್ಳಿ, ದುರ್ಯೋಧನ ಐಹೊಳೆ, ಪಿ ರಾಜೀವ್,ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಫೋಟೊಗಳಿಗೆ ಬೆಂಕಿ ಇಟ್ಟು ಪ್ರತಿಭಟಿಸಿದ್ದಾರೆ.
PublicNext
18/12/2021 05:07 pm