ಹುಬ್ಬಳ್ಳಿ: ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿಯ ಮೂರ್ತಿ ಸ್ಥಾಪನೆ ಮಾಡಿದ್ದೇವೆ. ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದನ್ನು ಸಹಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಏನೇ ಹೇಳೋದಿದ್ದರೂ ಸಹ ಶಾಂತವಾಗಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಭಂಗ ಮಾಡುವುದಕ್ಕೆ ನಮ್ಮ ಸರ್ಕಾರ ಬಿಡುವುದಿಲ್ಲ. ಯಾರೇ ಹೋರಾಟ ಮಾಡಿದರೂ ಕಾನೂನು ಸುವ್ಯವಸ್ಥೆ ಭಂಗ ಬರದಂತೆ ನೋಡಿ ಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
PublicNext
19/12/2021 10:45 am