ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಕ್ತಾಪುರ ಗ್ರಾಪಂನಲ್ಲಿ ಅವ್ಯವಹಾರ ಆರೋಪ: ದಲಿತ ಸೇನೆ ಪ್ರತಿಭಟನೆ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಯಕ್ತಪೂರ ಗ್ರಾಮ ಪಂಚಾಯಿತಿಯಲ್ಲಿ 14 ಮತ್ತು 15ನೇ ಹಣಕಾಸು ಯೋಜನೆಯಡಿಯಲ್ಲಿ ಅವ್ಯವಾರ ಆಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯತ ಕಾರ್ಯಾಲಯದ ಮುಂದೆ ದಲಿತ ಸೇನೆ ಮುಖಂಡರು ಉಗ್ರವಾದ ಪ್ರತಿಭಟನೆ ನಡೆಸಿದರು.

ಯಕ್ತಾಪುರ ಗ್ರಾಪಂನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಆ ಅವ್ಯವಹಾರದ ಹಣವನ್ನು ಮರಳಿ ಕಟ್ಟಿಸಿಕೊಂಡು ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

2018 ರಿಂದ 2021ನೇ ಸಾಲಿನ ವರೆಗೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರ ಲಕ್ಷಾಂತರ ರೂಪಾಯಿ ಬಿಡುಗಡೆ ಮಾಡಿದ್ದು, ಸದರಿ ಅನುದಾನದ ಕುರಿತು ನೆಪ ಮಾತ್ರಕ್ಕೆ ಕ್ರಿಯಾ ಯೋಜನೆ ಸೃಷ್ಟಿಸಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಅಭಿವೃದ್ಧಿ ಅಧಿಕಾರಿಗಳು ಸೇರಿಕೊಂಡು ಗ್ರಾಪಂ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೇ ಕುಡಿಯುವ ನೀರಿನಲ್ಲಿ ನಕಲಿ ಬಿಲ್ ಸೃಷ್ಟಿಸಿ ಹಣವನ್ನು ಡ್ರಾ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ದಲಿತ ಸೇನೆ ಜಿಲ್ಲಾಧ್ಯಕ್ಷ ಸದಾಶಿವ ಎಂ. ಬೋಮನಹಳ್ಳಿ, ಉಪಾಧ್ಯಕ್ಷ ಹಣಮಂತ ಕಟ್ಟಿಮನಿ, ಹುಲಗಪ್ಪ ದೇವತ್ಕಲ್, ಮಾನಪ್ಪ ಝಂಡದಕೇರಾ, ಸೇರಿದಂತೆ ಹಲವರು ಭಾಗಿಯಾಗಿದ್ದರು.

Edited By :
PublicNext

PublicNext

19/12/2021 11:01 am

Cinque Terre

19.75 K

Cinque Terre

0