ಬೆಳಗಾವಿ: ಕುಂದಾನಗರಿಯಲ್ಲಿ ಆರಂಭವಾದ ಅಧಿವೇಶನದಲ್ಲಿ ಕುತೂಹಲಕ್ಕೆ ಕಾರಣವಾಗಿರುವ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಇಂದು (ಸೋಮವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಮಂಗಳವಾರ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಪುಟ ಸಭೆಯಲ್ಲಿ ವಿಧೇಯಕ ಮಂಡನೆಗೆ ಅನುಮೋದನೆ ಸಿಕ್ಕಿದೆ.ಈ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯೂ ನಡೆದಿದೆ. ಮತಾಂತರ ನಿಷೇಧ ವಿಧೇಯಕದ ಅಂತಿಮ ರೂಪುರೇಷೆ ಹಾಗೂ ವಿರೋಧ ಪಕ್ಷಗಳ ವಿರೋಧವನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತಂತ್ರಗಾರಿಕೆ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
PublicNext
20/12/2021 03:21 pm