ಮುಂಬೈ: 30 ವರ್ಷಗಳ ಕಾಲ ಶಾಸಕರಾಗಿ ಸೇವೆ ಸಲ್ಲಿಸಿದವರು ನನ್ನ ಧರಂಗಾವ್ ಕ್ಷೇತ್ರಕ್ಕೆ ಭೇಟಿ ನೀಡಬೇಕು. ನನ್ನ ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿಯನ್ನು ಅವರು ನೇರವಾಗಿ ನೋಡಬೇಕು. ಹೇಮಾ ಮಾಲಿನಿಯ ಕೆನ್ನೆಯಂತೆ ಧರಂಗಾವ್ ನ ರಸ್ತೆಗಳು ನಿಮಗೆ ಕಾಣದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ ಎಂದು ತಮ್ಮ ರಾಜಕೀಯ ಎದುರಾಳಿ ಎನ್ ಸಿಪಿ ನಾಯಕ ಏಕನಾಥ್ ಖಾಡ್ಸೆಯನ್ನು ಲೇವಡಿ ಮಾಡುವ ಭರಾಟೆಯಲ್ಲಿ ಹೇಳಿದ್ದರು.
ಸದ್ಯ ಈ ಹೇಳಿಕೆಗೆ ಕ್ಷಮೆಯಾಚಿಸಿದ ಮಹಾರಾಷ್ಟ್ರ ಸಚಿವ ಗುಲಾಬ್ರಾವ್ ಪಾಟಿಲ್ “ನನ್ನ ಕ್ಷೇತ್ರದಲ್ಲಿ ಉತ್ತಮ ರಸ್ತೆಗಳನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ಆದರೆ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ, ನಾನು ಕ್ಷಮೆಯಾಚಿಸಲು ಬಯಸುತ್ತೇನೆ ಎಂದು ಶಿವಸೇನಾ ಸಚಿವರು ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.
ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಸಿದ್ದಕ್ಕಾಗಿ ಬಿಜೆಪಿ ಮತ್ತು ಎನ್ ಸಿಪಿಯಂತಹ ರಾಜಕೀಯ ಪಕ್ಷಗಳಿಂದ ವ್ಯಾಪಕ ಖಂಡನೆ ಮತ್ತು ರಾಜ್ಯ ಮಹಿಳಾ ಆಯೋಗದ ಆಕ್ರೋಶಕ್ಕೆ ಕಾರಣವಾದ ನಂತರ ಮಹಾರಾಷ್ಟ್ರದ ನೀರು ಸರಬರಾಜು ಮತ್ತು ನೈರ್ಮಲ್ಯ ಸಚಿವ ಗುಲಾಬ್ ರಾವ್ ಪಾಟಿಲ್ ಕ್ಷಮೆಯಾಚಿಸಿದ್ದಾರೆ.
PublicNext
20/12/2021 07:13 pm