ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಿರಲಿಲ್ಲ : BJP ವಿರುದ್ಧ ಗುಡುಗಿದ ರಾಗಾ

ನವದೆಹಲಿ: ಕೇಂದ್ರಕ್ಕೆ ಒಂದಿಲ್ಲೊಂದು ವಿಚಾರದಲ್ಲಿ ಚಾಟಿ ಬೀಸುತ್ತಲೇ ಇರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 2014ಕ್ಕೂ ಮೊದಲು ಗುಂಪು ಹತ್ಯೆ ನಡೆಯುತ್ತಲೇ ಇರಲಿಲ್ಲ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ರಾಗಾ ಟ್ವೀಟ್ : ಬಿಜೆಪಿ 2014ರಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅದು ಅಧಿಕಾರಕ್ಕೆ ಬರುವುದಕ್ಕೂ ಮೊದಲು ದೇಶದಲ್ಲಿ ಗುಂಪು ಹತ್ಯೆ (lynching) ಎಂಬುದನ್ನು ಪ್ರಾಯೋಗಿಕವಾಗಿ ನೋಡಲು ಸಾಧ್ಯವೇ ಇರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದ ನಂತರವೇ ಗುಂಪು ಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಅದಕ್ಕೂ ಮೊದಲು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಗುಂಪು ಹತ್ಯೆಗಳು ನಡೆಯುತ್ತಿರಲಿಲ್ಲ ಎಂದಿದ್ದಾರೆ. ಪಂಜಾಬ್ ನಲ್ಲಿ ಇತ್ತೀಚೆಗೆ 24ಗಂಟೆಯೊಳಗೆ ಎರಡು ಗುಂಪು ಹತ್ಯೆಗಳು ನಡೆದ ಬೆನ್ನಲ್ಲೇ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

21/12/2021 04:47 pm

Cinque Terre

50.54 K

Cinque Terre

14

ಸಂಬಂಧಿತ ಸುದ್ದಿ