ನವದೆಹಲಿ: ಉತ್ತರ ಪ್ರದೇಶ ಸರ್ಕಾರ ಏನು ಮಾಡುತ್ತಿದೆ? ಜನರ ಸಮಸ್ಯೆ ಪರಿಹಾರ ಮಾಡುತ್ತಿಲ್ಲ, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಪ್ರತಿಪಕ್ಷಗಳ ಫೋನ್ ಕದ್ದಾಲಿಕೆ ಕೆಲಸಗಳಲ್ಲಿ ತೊಡಗಿಕೊಂಡಿದೆ. ನನ್ನ ಮಕ್ಕಳ ಇನ್‍ಸ್ಟಾಗ್ರಾಮ್ ಖಾತೆ ಹ್ಯಾಕ್ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ.
ಮಹಿಳಾ ಸಬಲೀಕರಣಕ್ಕಾಗಿ ಮೀಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ ಅವರ ಪ್ರಯಾಗ್‍ರಾಜ್ ಭೇಟಿಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ವಿರುದ್ಧವಾಗಿ ಆರೋಪ ಮಾಡಿದ್ದಾರೆ.
ಪ್ರಯಾಗ್ ರಾಜ್‍ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರ ಬಗ್ಗೆ ವ್ಯಂಗ್ಯವಾಡಿರುವ ಪ್ರಿಯಾಂಕಾ ಗಾಂಧಿ, ನಾನೊಬ್ಬಳು ಹುಡುಗಿಯಾಗಿ ಹುಟ್ಟಿದ್ದೇನೆ. ನಾನು ಹೋರಾಟವನ್ನೂ ಮಾಡಬಲ್ಲೆ. ದೇಶದ ಶಕ್ತಿಯಾಗಿರುವ ಮಹಿಳೆಯರ ಎದುರು ಪ್ರಧಾನಮಂತ್ರಿ ನರೇಂದ್ರ ಮೋದಿ ತಲೆ ಬಾಗಿದ್ದಾರೆ. ಉತ್ತರ ಪ್ರದೇಶದ ಮಹಿಳೆಯರಿಗೆ ಸಿಕ್ಕ ಜಯ ಇದಾಗಿದೆ. ನನಗೆ ತುಂಬ ಸಂತೋಷವಾಗಿದೆ ಎಂದಿದ್ದಾರೆ.
PublicNext
21/12/2021 08:02 pm