ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕ ಗಡಿಯಲ್ಲಿ ಕನ್ನಡ ಧ್ವಜಕ್ಕೆ ಮತ್ತೆ ಬೆಂಕಿ ಇಟ್ಟ ಶಿವಸೇನೆ ಪುಂಡರು

ಕಾಗವಾಡ: ಮಹಾರಾಷ್ಟ್ರದಲ್ಲಿ ಮತ್ತೆ ಕನ್ನಡ ಧ್ವಜಕ್ಕೆ ಬೆಂಕಿಯಿಟ್ಟ ಶಿವಸೇನೆ ಪುಂಡರು ವಿಕೃತಿ ತೋರಿದ್ದಾರೆ. ಹಾಗೂ ಕರ್ನಾಟಕ ರಾಜ್ಯದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಮಿರಜ್‌ನ ಮಹಾರಾಣಾ ಪ್ರತಾಪ್ ಚೌಕ್‌ನಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆಗೆ ಅಪಮಾನಿಸಿದ್ದಾರೆ ಎಂದು ಆರೋಪಿಸಿದ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದಾರೆ. ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಶಿವಸೇನೆ ಕಾರ್ಯಕರ್ತರು ಕರ್ನಾಟಕ-ಮಹಾರಾಷ್ಟ್ರ ಗಡಿಗೆ ನುಗ್ಗಿ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆ ನೀಡಿದ್ದಾರೆ.

Edited By : Nagesh Gaonkar
PublicNext

PublicNext

22/12/2021 05:59 pm

Cinque Terre

38.93 K

Cinque Terre

8

ಸಂಬಂಧಿತ ಸುದ್ದಿ