ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಇದನ್ನು ಕಳ್ಳರಂತೆ ಜಾರಿಗೊಳಿಸಿದ್ದಾರೆ: ಸಿದ್ದರಾಮಯ್ಯ

ಬೆಳಗಾವಿ: ಮತಾಂತರ ಕಾಯ್ದೆಯನ್ನು ಕಳ್ಳರ ರೀತಿಯಲ್ಲಿ ಜಾರಿಗೆ ತಂದಿದ್ದಾರೆ. ಮಾಧ್ಯಮಗಳನ್ನು ಹೊರಗಿಟ್ಟು ಚರ್ಚೆ ನಡೆಸಲು ಅವಕಾಶ ಕೊಟ್ಟಿದ್ದಾರೆ. ಈ ಸರ್ಕಾರ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ಸದನದ ಒಳಗೆ, ಹೊರಗೆ ಹೋರಾಟ ನಡೆಸುತ್ತೇವೆ. ಜನರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕಿತ್ತು. ಇದರ ಬಗ್ಗೆ ಸರ್ಕಾರಕ್ಕೆಕಾಳಜಿ ಇಲ್ಲ. ಅಭಿವೃದ್ಧಿ ಮಾಡಲು ಇವರ ಬಳಿ ಹಣ ಇಲ್ಲ. 2019ರಲ್ಲಿ ನೆರೆಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಕೊಟ್ಟಿಲ್ಲ. ಇದೆಲ್ಲವನ್ನೂ ಮರೆಮಾಚಲು ರಾಜ್ಯ ಸರ್ಕಾರ ಈ ಕಾಯ್ದೆಯನ್ನು ಜಾರಿ ಮಾಡಿದೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Edited By : Manjunath H D
PublicNext

PublicNext

22/12/2021 06:33 pm

Cinque Terre

72.03 K

Cinque Terre

9

ಸಂಬಂಧಿತ ಸುದ್ದಿ