ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ವಿಚಾರ ಇಲ್ಲ, ಯಾರು ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳು ಹರಡುತ್ತಿರುವುದು ತಪ್ಪು, ಅವರು ಅಮೆರಿಕಾ ಹೋಗ್ತಾರೆ. ಅವರನ್ನ ಕೆಳಗಿಳಿಸುತ್ತಾರೆ ಇದೆಲ್ಲ ಸುಳ್ಳು, ಸಿಎಂ ಬದಲಾವಣೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಯಾರೋ ಈ ರೀತಿ ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಇದನ್ನು ಕೈಬಿಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿ. ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈಗಾಗಲೆ ರುದ್ರಭೂಮಿ ಸ್ವಚ್ಛತೆ ಕೈಗೆತ್ತಿಕೊಳ್ಳಲಾಗಿದೆ. ಶಾಶ್ವತವಾಗಿ ಸ್ವಚ್ಚಗೊಳಿಸಿ, ಸುಣ್ಣ-ಬಣ್ಣ ಬಳಿದು- ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.
ರಾಷ್ಟ್ರೀಯ ಪಕ್ಷ, ರಾಷ್ಟ್ರೀಯ ಸೇವೆಯಲ್ಲಿ ತೊಡಗಿಸುಕೊಳ್ಳಬೇಕು ಎಂಬುದು ಪ್ರಧಾನಿಗಳ ಆಶಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಸೆಯಂತೆ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಂಸತ್ ಸದನದಲ್ಲಿ ಪ್ರತಿಪಕ್ಷಗಳ ವರ್ತನೆಗೆ ವಿಷಾದ ವ್ಯಕ್ತಪಡಿಸಿ ಅಂದ್ರು ಕಾಂಗ್ರೆಸ್ ಕೇಳಲಿಲ್ಲ. ಮೋದಿ ಏನೂ ಮಾಡಿದ್ರು ಕಾಂಗ್ರೆಸ್ ನವರು ವಿರೋಧ ಮಾಡ್ತಾ ಇದಾರೆ. ಮೋದಿ ಪೋಬಿಯಾ ಎನ್ನುವಂತೆ ಕಾಂಗ್ರೆಸ್ ನವರು ನಡೆದುಕೊಳ್ಳುತ್ತಿದ್ದಾರೆ.ಅಂಬೇಡ್ಕರ್ ರವರ ಸಂವಿಧಾನವನ್ನು ಸಹ ಬಹಿಷ್ಕಾರ ಮಾಡಿದ್ರು, ಕಾಂಗ್ರೆಸ್ ಪಕ್ಷ ಬಹಿಷ್ಕಾರ ಮಾಡಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ ಎಂದರು.
PublicNext
25/12/2021 09:54 am