ವಿಜಯಪುರ: ಹೊಸ ವರ್ಷಾಚರಣೆ ಮಾರ್ಗಸೂಚಿ ಬಗ್ಗೆ ನಾಳೆ ರವಿವಾರ ಸಭೆ ಕರೆದು ಚರ್ಚೆ ಮಾಡಿ ಅಂತಿಮ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಜಯಪುರಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಾರಾಷ್ಟ್ರ, ಕೇರಳದಿಂದ ಬರುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ರಾಜ್ಯದ ಎಲ್ಲ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು. ನೈಟ್ ಕರ್ಫ್ಯೂ ಬಗ್ಗೆಯೂ ನಾಳೆಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
PublicNext
25/12/2021 03:26 pm