ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೈಟ್ ಕರ್ಫ್ಯೂ ಆದೇಶ, ಸರಕಾರದ ವಿರುದ್ಧ ಸಿ.ಟಿ.ರವಿ ಅಸಮಾಧಾನ

ಚಿಕ್ಕಮಗಳೂರು :ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡೋಕಾಗಲ್ಲ, ಒಮಿಕ್ರಾನ್ ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ,

ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು.

ಸದ್ಯ ಜನಜೀವನ ಸಹಜ ಸ್ಥಿತಿಯಲ್ಲಿದೆ, ಆದ್ರೆ ಎಚ್ಚರವಹಿಸಬೇಕು ಎಂದು ಸರ್ಕಾರದ ನಿರ್ಣಯದ ವಿರುದ್ಧ ಸಿ.ಟಿ ರವಿ ಚಾಟಿ ಬೀಸಿದ್ದಾರೆ.

ಅನಗತ್ಯ ಭಯ ಹುಟ್ಟಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

Edited By : Shivu K
PublicNext

PublicNext

27/12/2021 01:34 pm

Cinque Terre

61.3 K

Cinque Terre

5

ಸಂಬಂಧಿತ ಸುದ್ದಿ