ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದ ಜನಸಾಮಾನ್ಯರಿಗೆ ಭಯ ಕಾಡುತ್ತಿದೆ, ಇತಿಹಾಸ ತಿರುಚಲಾಗುತ್ತಿದೆ: ಸೋನಿಯಾ ಆತಂಕ

ನವದೆಹಲಿ: ದೇಶದ ಜನಸಾಮಾನ್ಯರಿಗೆ ಭಯ ಮತ್ತು ಅಭದ್ರತೆ ಕಾಡುತ್ತಿದೆ. ದೇಶದ ಇತಿಹಾಸವನ್ನು ತಿರುಚಲಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಬದಿಗೊತ್ತಿ ಸರ್ವಾಧಿಕಾರ ನಡೆಸಲಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

136ನೇ ಕಾಂಗ್ರೆಸ್ ಸಂಸ್ಥಾಪನ ದಿನದ ಹಿನ್ನಲೆ ಕಾರ್ಯಕರ್ತರಿಗಾಗಿ ಸೋನಿಯಾಗಾಂಧಿ ವೀಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ಈ ವೀಡಿಯೋ ಸಂದೇಶದಲ್ಲಿ ಸೋನಿಯಾ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಜನಸಾಮಾನ್ಯರಿಗಾಗಿ ದೇಶ ವಿರೋಧಿ, ಸಮಾಜ ವಿರೋಧಿ ಷಡ್ಯಂತ್ರಗಳ ವಿರುದ್ಧ ಸಾಧ್ಯವಿರುವಷ್ಟು ಹೋರಾಟ ಮಾಡುತ್ತೇನೆ. ದೇಶದ ಉನ್ನತ ಪರಂಪರೆಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅದನ್ನು ಉಳಿಸಲು ಎಲ್ಲ ಕಾಂಗ್ರೆಸ್ಸಿಗರು ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಬೇಕಿದೆ ಎಂದು ಕಾರ್ಯಕರ್ತರಿಗೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.

ತಮ್ಮ ಮಾತಿನಲ್ಲಿ ಕಾಂಗ್ರೆಸ್ ಇತಿಹಾಸವನ್ನು ನೆನಪಿಸಿದ ಸೋನಿಯಾಗಾಂಧಿ, ಕಾಂಗ್ರೆಸ್ ಮತ್ತು ಅದರ ಎಲ್ಲಾ ನಾಯಕರು ಸ್ವಾತಂತ್ರ್ಯ ಚಳವಳಿಯಲ್ಲಿ ಉತ್ಸಾಹದಿಂದ ಭಾಗವಹಿಸಿ ಹೋರಾಡಿದ್ದಾರೆ. ಆ ಮೂಲಕ ದೇಶಕ್ಕೆ ಅಡಿಪಾಯ ಹಾಕಿದ್ದಾರೆ. ಈ ಅಡಿಪಾಯದ ಮೇಲೆ ನಾವು ಬಲಿಷ್ಠ ಭಾರತವನ್ನು ನಿರ್ಮಿಸಿದ್ದೇವೆ. ದೇಶದ ಜನರ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಕಾಪಾಡಿದ್ದೇವೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸದವರಿಗೆ ಈ ಹೋರಾಟದ ಮೌಲ್ಯವನ್ನು ಅರ್ಥಮಾಡಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಇಂದು ಅವರು ಭಾರತದ ಆ ಭದ್ರ ಬುನಾದಿಯನ್ನು ದುರ್ಬಲಗೊಳಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದ ಸೋನಿಯಾ ಗಾಂಧಿ ಬಿಜೆಪಿ ನಾಯಕರ ನಡೆಯನ್ನು ಖಂಡಿಸಿದ್ದಾರೆ.

Edited By : Nagaraj Tulugeri
PublicNext

PublicNext

28/12/2021 05:51 pm

Cinque Terre

65.07 K

Cinque Terre

29

ಸಂಬಂಧಿತ ಸುದ್ದಿ