ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವರಿಷ್ಠರು ಹೇಳಿದರೆ ಮೊದಲು ನಾನೇ ರಾಜೀನಾಮೆ ಕೊಡುತ್ತೇನೆ : ಈಶ್ವರಪ್ಪ

ಹುಬ್ಬಳ್ಳಿ: ಸಚಿವ ಸ್ಥಾನ ಬಿಟ್ಟುಕೊಡಲು ಪಕ್ಷದ ಹಿರಿಯರು ಧಾರಾಳವಾಗಿ ತಯಾರಿದ್ದೇವೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದ ವರಿಷ್ಠರು ಹಿರಿಯರನ್ನು ತೆಗೆಬೇಕು ಎಂದು ತೀರ್ಮಾನಿಸಿದರೆ ಪ್ರಥಮವಾಗಿ ಒಪ್ಪಿಕೊಂಡು ಸಂತೋಷದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದರು.

ರಾಜ್ಯ ಅಧ್ಯಕ್ಷರು ಹಿಂದೂಳಿದ ವರ್ಗದ ಸಮಾಜದ ಜವಾಬ್ದಾರಿ ನನಗೆ ನೀಡಿದ್ದಾರೆ.ಆದರಿಂದ ಶಿವಮೊಗ್ಗದಲ್ಲಿ ಜ. 5ರಂದು ರಾಜ್ಯ ಕಾರ್ಯಕಾರಿ ಸಮಿತಿಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸ್ವಯಂ ಪ್ರೇರಿತವಾಗಿ ಸಚಿವ ಸ್ಥಾನ ಬಿಟ್ಟುಕೊಡುತ್ತಿರಾ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಸಿ,ರಾಜಕೀಯದಲ್ಲಿ ಸ್ಥಾನಮಾನದ ಬಹಳ ಮಹತ್ವದಾಗಿದೆ. ಅಧಿಕಾರದಲ್ಲಿ ಎಷ್ಟರ ಮಟ್ಟಿಗೆ ಒಳ್ಳೆದು ಕೆಟ್ಟುದ್ದು ಎಂಬುವುದು ರಾಜಕೀಯದಲ್ಲಿ ಇರುವವರಿಗೆ ಗೊತ್ತು ಎಂದರು.

ಕರ್ನಾಟಕ ಬಂದ್ ಬಗ್ಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರದಿಂದ ಎಂಇಎಸ್ ಪುಂಡರಿಗೆ ಕಠಿಣ ಶಿಕ್ಷೆ ನೀಡಲು ತಿಳಿಸಲಾಗಿದೆ. ಬಂದ್ ಕರೆಗೆ ಮಿಶ್ರ ಪ್ರಕ್ರಿಯೆ ವ್ಯಕ್ತವಾಗುತ್ತಿದ್ದು, ಬಂದ್ ಈ ಪರಿಸ್ಥಿತಿಯಲ್ಲಿ ಒಳ್ಳೆಯದಲ್ಲ. ಎಂಇಎಸ್ ಧೋರಣೆ ಬಗ್ಗೆ ಮಾಹಿತಿ ಕಲೆಹಾಕಿ ಕೇಂದ್ರಕ್ಕೆ ನೀಡಲಾಗಿದ್ದು,ಅವರು ಕ್ರಮಕೈಗೊಳ್ಳುತ್ತಾರೆ ಎಂದರು.

Edited By : Manjunath H D
PublicNext

PublicNext

29/12/2021 03:13 pm

Cinque Terre

50.46 K

Cinque Terre

3

ಸಂಬಂಧಿತ ಸುದ್ದಿ