ಹುಬ್ಬಳ್ಳಿ: ಮತಾಂತರ ಕಾಯ್ದೆ ಜಾರಿಗೆ ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ.ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ ಮಾಡಿಸುತ್ತೇವೆ. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ ಎಂದು ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆಗೆ ಅವಕಾಶ ಮಾಡಿಕೊಡ್ತೇವೆ. ಇವುಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೆ ಏನೂ ಇರಲ್ಲ ಎಂದಿದ್ದಾರೆ. ಮುಂದಿನ ಏಪ್ರಿಲ್ ತಿಂಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತದೆ. ಮೋದಿಯವರು ನನಗೆ ಕೆಲ ಮಾರ್ಗದರ್ಶನ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕೆಲ ಕಾರ್ಯಕ್ರಮ ಮಾಡಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ ಮಾಡುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.
PublicNext
30/12/2021 07:45 am